ಡೆಡ್ಲಿ ‘ನಿಪಾ ವೈರಸ್’ ನಿಂದ ಎಚ್ಚರಿಕೆಯಿಂದಿರುವುದು ಹೇಗೆ..?

ಡೆಂಗ್ಯೂ, ಹಂದಿಜ್ವರ ಹೀಗೆ ನಾನಾ ರೋಗಗಳು ಬಂದದ್ದು ಆಯಿತು ಕಾಡಿದ್ದು ಆಯಿತು, ಈಗ ಮತ್ತೊಂದು ವೈರಸ್ ಭಾರತದಲ್ಲಿ ಭಯ ಸೃಷ್ಟಿಸುತ್ತಿದೆ . ಅದೇ ‘ನಿಪಾ ವೈರಸ್’ ಅಂದರೆ ಬಾವಲಿ ಜ್ವರ. ಈ ಜ್ವರಕ್ಕೆ ಕೇರಳದಲ್ಲಿ ಈಗಾಗಲೇ ಒಬ್ಬ ನರ್ಸ್ ಸೇರಿ 10 ಕ್ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. ಪುಣೆಯಲ್ಲಿರುವ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ ಮೂವರ ಸಾವಿಗೆ ನಿಪಾ ವೈರಸ್ ಕಾರಣ ಎನ್ನುವುದನ್ನು ದೃಢಪಡಿಸಿದೆ. ಕೇರಳದ ಕೋಝಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಈ ರೋಗ ವ್ಯಾಪಕವಾಗಿ ಹರಡಿದೆ ಎನ್ನಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಅಕ್ಕಪಕ್ಕದ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಜೊತೆಗೆ ಎಲ್ಲಾ ವಿವರಗಳನ್ನು ಆರೋಗ್ಯ ಇಲಾಖೆಗೆ ಪ್ರತಿ ನಿತ್ಯ ಆರೋಗ್ಯ ಇಲಾಖೆಗೆ ನೀಡುವಂತೆ ಸೂಚನೆ ನೀಡಲಾಗಿದೆ.

+ ನಿಪಾ ವೈರಸ್ ಎಂದರೇನು, ಹೇಗೆ ಹರಡುತ್ತೆ.. ?
1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಪ್ಪಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಪಾ ವೈರಸ್ ಎಂದು ಕರೆಯುತ್ತಾರೆ. ನಿಪಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ ಎನ್ನಲಾಗಿದೆ. ಹೀಗಾಗಿ ನಿಪಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ. ಈ ವೈರಸ್ ಬಾವಲಿಗಳಿಂದ, ಪ್ರಾಣಿಗಳಿಗೆ ಹರಡುತ್ತದೆ. ಬಾವಲಿಗಳು ಕಚ್ಚಿದ ಹಣ್ಣನ್ನು ತಿನ್ನುವುದರಿಂದ ಮನುಷ್ಯರಿಗೆ ಹರಡುತ್ತದೆ. ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಬಾವಲಿಗಳಿದ್ದ ಬಾವಿಯ ನೀರು ಸೇವನೆ ಹಾಗೂ ಬಾವಲಿಗಳು ಕಚ್ಚಿದ ಮಾವಿನ ಹಣ್ಣು ತಿಂದಿದ್ದರಿಂದ ಈ ರೋಗ ಹರಡಿದೆ ಎನ್ನುವುದು ಸದ್ಯಕ್ಕೆ ಖಚಿತವಾಗಿದೆ. ಬಾವಿಯ ನೀರಿನಲ್ಲಿ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬಾವಿಯನ್ನು ಮುಚ್ಚಿದ್ದೇವೆ ಎಂದು ಶೈಲಜಾ ಸ್ಪಷ್ಟನೆ ನೀಡಿದ್ದಾರೆ. ರೋಗಿಗಳ ಜೊತೆ ಸಂಪರ್ಕದಲ್ಲಿದ್ದ ಎಲ್ಲರ ಆರೋಗ್ಯ ತಪಾಸಣೆ ಮಾಡಲು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

+ ನಿಪಾ ವೈರಸ್ ಲಕ್ಷಣಗಳು :
ಈ ವೈರಸ್ ಹೇಹ ಸೇರಿದ ಆರಂಭದಲ್ಲಿ ಆರಂಭದಲ್ಲಿ ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ, ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ. ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ, ಬಳಿಕ ಈ ವೈರಸ್ ಪೀಡಿತರು ಪ್ರಜ್ಞಾಹೀನರಾಗುತ್ತಾರೆ, ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು ಖಚಿತ ಎನ್ನಲಾಗಿದೆ.  ನಿಫಾ ವೈರಸ್​ ಅಥವಾ ಎನ್​ಐವಿ ಸೋಂಕು ತಗುಲಿದಾಗ ಉಸಿರಾಟದ ತೊಂದರೆ, ಮೆದುಳಿನ ಉರಿಯೂತ, ಜ್ವರ, ತಲೆನೋವು, ಅರೆ ನಿದ್ರಾವಸ್ಥೆ, ದಿಗ್ಭ್ರಮೆಯಂಥ ಲಕ್ಷಣಗಳು ಕಂಡುಬರುತ್ತವೆ.  ನಿಫಾ ವೈರಸ್​ಗೆ ಇನ್ನೂ ಯಾವುದೇ ವ್ಯಾಕ್ಸಿನ್​ ಕಂಡು ಹಿಡಿದಿಲ್ಲ. ಇದಕ್ಕೆ ಪ್ರಮುಖ ಚಿಕಿತ್ಸೆಯೆಂದರೆ ತೀವ್ರ ಆರೈಕೆ ಎಂದು ವಿಶ್ವಸಂಸ್ಥೆ ಹೇಳಿದೆ.

+ ಈ ವೈರಸ್ ನಿಂದ ದೂರವಿರುವುದು ಹೇಗೆ..?
ಪ್ರಾಣಿ ಪಕ್ಷಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸಬೇಡಿ, ಒಂದು ವೇಳೆ ನೀವು ರೋಗಿಯ ಜೊತೆಗಿದ್ದರೆ ಶುಚಿತ್ವಕ್ಕೆ ಹೆಚ್ಚು ಗಮನ ಕೊಡಿ. ರೋಗಿಯ ಚಿಕಿತ್ಸೆ ವೇಳೆ ಮುಖಕ್ಕೆ ಮಾಸ್ಕ್, ಕೈಗವಚ ಧರಿಸಿ, ಬಾವಲಿಗಳ ಸಂಖ್ಯೆ ಹೆಚ್ಚಿರುವ ಕಡೆ ಸಂಗ್ರಹಿಸುವ ಶೇಂದಿ, ಪಾನೀಯಗಳನ್ನು ಸೇವಿಸಬೇಡಿ.

ಇತರರಿಗೂ ಶೇರ್ ಮಾಡಿ

Leave a Reply

Your email address will not be published. Required fields are marked *